ಲೇವ್ಯಕಾಂಡ 22:24 · ಕನ್ನಡ ಬೈಬಲ್
ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು.
Cross references
ಲೇವ್ಯಕಾಂಡ 21:20
ಗೂನು ಬೆನ್ನುಳ್ಳವನು ಗಿಡ್ಡನು ಕಣ್ಣುಗಳಲ್ಲಿ ಕಳಂಕವುಳ್ಳವನು ಹುರುಕುಳ್ಳವನು ತುರಿಯುಳ್ಳವನು ತನ್ನ ಬೀಜಹೊಡೆದವನು
ಲೇವ್ಯಕಾಂಡ 22:20
ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ.
ದ್ವಿತೀಯೋಪದೇಶಕಾಂಡ 23:1
ಬೀಜದಲ್ಲಿ ಗಾಯವುಳ್ಳವನೂ ರಹಸ್ಯಾಂಗ ಕೊಯ್ಯಲ್ಪಟ್ಟವನೂ ಕರ್ತನ ಸಭೆಗೆ ಸೇರ ಬಾರದು.