ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ.
Cross references
ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.
ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.
ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು.
ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.
ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.
ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.
ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.
ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.