Home Bibles ಲೇವ್ಯಕಾಂಡ 23:39 · ಕನ್ನಡ ಬೈಬಲ್
ಲೇವ್ಯಕಾಂಡ 23:39 · ಕನ್ನಡ ಬೈಬಲ್

ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು.

Cross references

ನಿರ್ಗಮಕಾಂಡ 23:16

ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.

ಲೇವ್ಯಕಾಂಡ 23:24

ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತ ನಾಡಿ--ಏಳನೆಯ ತಿಂಗಳಿನ ಮೊದಲನೆಯ ದಿವಸ ದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥ ವಾದ ಸಬ್ಬತ್ತೂ ಪರಿಶುದ್ಧ ಸಭೆಯ ಕೂಟವೂ ಇರ ಬೇಕು.

ಲೇವ್ಯಕಾಂಡ 23:34

ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.

ಲೇವ್ಯಕಾಂಡ 23:36

ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.

ದ್ವಿತೀಯೋಪದೇಶಕಾಂಡ 16:13

ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು.

Interlinear

Choose Theme