Home Bibles ಲೇವ್ಯಕಾಂಡ 25:2 · ಕನ್ನಡ ಬೈಬಲ್
ಲೇವ್ಯಕಾಂಡ 25:2 · ಕನ್ನಡ ಬೈಬಲ್

ಇಸ್ರಾಯೇಲ್‌ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು--ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ ದೇಶವು ಕರ್ತನಿ ಗಾಗಿ ಸಬ್ಬತ್ತನ್ನು ಕೈಕೊಳ್ಳಬೇಕು.

Cross references

ನಿರ್ಗಮಕಾಂಡ 23:10

ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು.

ಲೇವ್ಯಕಾಂಡ 14:34

ನಾನು ನಿಮಗೆ ಸ್ವಾಸ್ತ್ಯವಾಗಿ ಕೊಡುವದಕ್ಕಿರುವ ಕಾನಾನ್‌ ದೇಶದೊ ಳಗೆ ನೀವು ಬಂದಾಗ ನಿಮಗೆ ಸ್ವಾಸ್ತ್ಯವಾಗಿ ಕೊಡುವ ಮನೆಯಲ್ಲಿ ಕುಷ್ಠವನ್ನು ಬರಮಾಡಿದಾಗ

ಲೇವ್ಯಕಾಂಡ 23:32

ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ.

ಲೇವ್ಯಕಾಂಡ 26:34

ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು.

ಲೇವ್ಯಕಾಂಡ 26:35

ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು.

ದ್ವಿತೀಯೋಪದೇಶಕಾಂಡ 32:8

ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್‌ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.

ದ್ವಿತೀಯೋಪದೇಶಕಾಂಡ 32:49

ಈ ಅಬಾರೀಮ್‌ ಪರ್ವತದ ಮೇಲೆ ಮೋವಾಬ್‌ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್‌ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್‌ ದೇಶವನ್ನು ನೋಡು,

ದ್ವಿತೀಯೋಪದೇಶಕಾಂಡ 34:4

ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.

2 ದಿನವೃತ್ತಾಂತ 36:21

ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.

ಕೀರ್ತನೆಗಳು 24:1

ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.

ಕೀರ್ತನೆಗಳು 115:16

ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.

ಯೆಶಾಯ 8:8

ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.

ಯೆರೆಮಿಯ 27:5

ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--

Interlinear

Choose Theme