ಇದಲ್ಲದೆ ಲೇವಿಯರ ಪಟ್ಟಣಗಳ ವಿಷಯವಾ ಗಿಯೂ ಅವರ ಸ್ವಾಸ್ತ್ಯವಾಗಿರುವ ಪಟ್ಟಣಗಳಲ್ಲಿನ ಮನೆಗಳ ವಿಷಯವಾಗಿಯೂ ಲೇವಿಯರು ಯಾವ ಸಮಯದಲ್ಲಿಯಾದರೂ ಬಿಡಿಸಿಕೊಳ್ಳಬಹುದು.
Cross references
ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು.
ಲೇವಿಯರ ಪಿತೃಗಳ ಹಿರಿಯರು ಕಾನಾನ್ ದೇಶದ ಶೀಲೋವಿನಲ್ಲಿರುವ ಯಾಜಕ ನಾದ ಎಲಿಯಾಜರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಪಿತೃಗಳಲ್ಲಿರುವ ಹಿರಿಯರ ಬಳಿಗೂ ಬಂದು ಅವರ ಸಂಗಡ ಮಾತನಾಡಿ--
ಇದ ಲ್ಲದೆ ಯಾಜಕರಲ್ಲಿರುವ ಸಮಸ್ತ ಗಂಡಸರಿಗೂ ಲೇವಿ ಯರಲ್ಲಿ ಬರೆಯಲ್ಪಟ್ಟಿದ್ದ ಸಮಸ್ತರಿಗೂ ಪಾಲನ್ನು ಕೊಡುವದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ಮಕ್ಕಳಲ್ಲಿ ಹೆಸರಿನಿಂದ ಬರೆಯಲ್ಪಟ್ಟ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.