Home Bibles ಲೇವ್ಯಕಾಂಡ 25:50 · ಕನ್ನಡ ಬೈಬಲ್
ಲೇವ್ಯಕಾಂಡ 25:50 · ಕನ್ನಡ ಬೈಬಲ್

ಅವನು ತನ್ನನ್ನು ಕೊಂಡುಕೊಂಡವನಿಗೆ ಮಾರಲ್ಪಟ್ಟ ವರುಷ ಮೊದಲುಗೊಂಡು ಜೂಬಿಲಿ ಸಂವತ್ಸರದ ವರೆಗೆ ಅವನೊಂದಿಗೆ ಲೆಕ್ಕಮಾಡಬೇಕು. ಅವನ ಮಾರಾಟದ ಕ್ರಯವು ವರುಷಗಳ ಲೆಕ್ಕದ ಪ್ರಕಾರ ಕೂಲಿಯಾಳಿನ ಸಮಯಕ್ಕೆ ತಕ್ಕಂತೆ ಅವನೊಂದಿಗೆ ಅದು ಇರುವದು.

Cross references

ಲೇವ್ಯಕಾಂಡ 25:40

ಆದರೆ ಕೂಲಿ ಯಾಳಂತೆಯೂ ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದ ವರೆಗೆ ನಿನಗೆ ಸೇವೆಮಾಡಲಿ.

ಲೇವ್ಯಕಾಂಡ 25:53

ವರುಷದ ಕೂಲಿಯಾಳಿನಂತೆ ಅವನ ಬಳಿಯಲ್ಲಿ ಇರಬೇಕು. ಆದರೆ ಮತ್ತೊಬ್ಬನು ನಿನ್ನ ದೃಷ್ಟಿಯಲ್ಲಿ ಅವನ ಮೇಲೆ ಕಠಿಣವಾದ ದೊರೆತನ ಮಾಡಬಾರದು.

ದ್ವಿತೀಯೋಪದೇಶಕಾಂಡ 15:18

ಅವನನ್ನು ನಿನ್ನಿಂದ ಬಿಡುಗಡೆಯಾಗಿ ಕಳುಹಿಸು ವದು ನಿನಗೆ ಕಠಿಣವೆಂದು ಕಾಣಿಸಬಾರದು; ಅವನು ಆರು ವರುಷ ನಿನ್ನ ದಾಸನಾಗಿದ್ದರಿಂದ ಸಂಬಳದ ಸೇವಕನಿಗಿಂತ ಎರಡರಷ್ಟಾಗಿದ್ದನು; ಹೀಗೆ ನೀನು ಮಾಡುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.

ಯೋಬ 7:1

ಭೂಮಿಯ ಮೇಲೆ ಮನುಷ್ಯನಿಗೆ ನೇಮಿಸಲ್ಪಟ್ಟ ಕಾಲ ಉಂಟಲ್ಲವೋ? ಅವನ ದಿವಸಗಳು ಕೂಲಿಯವನ ದಿವಸಗಳ ಹಾಗಲ್ಲವೋ?

ಯೋಬ 14:6

ಹೀಗಿರುವ ದರಿಂದ ಅವನು ಕೂಲಿಯವನ ಹಾಗೆ ತನ್ನ ದಿವಸದಲ್ಲಿ ವಿಶ್ರಾಂತಿ ಪಡೆಯುವಂತೆ ಅವನು ಪೂರೈಸುವ ವರೆಗೆ ಅವನಿಂದ ತಿರುಗು.

ಯೆಶಾಯ 16:14

ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.

ಯೆಶಾಯ 21:16

ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.

Interlinear

Choose Theme