Home Bibles ಲೇವ್ಯಕಾಂಡ 25:55 · ಕನ್ನಡ ಬೈಬಲ್
ಲೇವ್ಯಕಾಂಡ 25:55 · ಕನ್ನಡ ಬೈಬಲ್

ಯಾಕಂದರೆ ಇಸ್ರಾಯೇಲ್‌ ಮಕ್ಕಳು ನನ್ನ ದಾಸರು, ಐಗುಪ್ತದೇಶ ದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿಮ್ಮ ದೇವರಾದ ಕರ್ತನು ನಾನೇ.

Cross references

ನಿರ್ಗಮಕಾಂಡ 13:3

ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.

ನಿರ್ಗಮಕಾಂಡ 20:2

ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.

ಲೇವ್ಯಕಾಂಡ 25:42

ಐಗುಪ್ತದೇಶದೊಳಗಿಂದ ನಾನು ಹೊರಗೆ ಕರತಂದ ಅವರು ನನ್ನ ಸೇವಕರಾಗಿದ್ದಾರೆ; ಅವರು ದಾಸರಾಗಿ ಮಾರಲ್ಪಡಬಾರದು.

ಕೀರ್ತನೆಗಳು 116:16

ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.

ಯೆಶಾಯ 43:3

ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.

ಲೂಕ 1:74

ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ

ರೋಮಾಪುರದವರಿಗೆ 6:14

ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.

ರೋಮಾಪುರದವರಿಗೆ 6:17

ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.

ರೋಮಾಪುರದವರಿಗೆ 6:22

ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.

1 ಕೊರಿಂಥದವರಿಗೆ 7:22

ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.

1 ಕೊರಿಂಥದವರಿಗೆ 9:19

ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.

1 ಕೊರಿಂಥದವರಿಗೆ 9:21

(ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.

ಗಲಾತ್ಯದವರಿಗೆ 5:13

ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.

Interlinear

Choose Theme