Home Bibles ಲೇವ್ಯಕಾಂಡ 25:8 · ಕನ್ನಡ ಬೈಬಲ್
ಲೇವ್ಯಕಾಂಡ 25:8 · ಕನ್ನಡ ಬೈಬಲ್

ಹೀಗೆ ಏಳು ವರುಷಗಳನ್ನು ಏಳು ಸಾರಿ ಏಳು ಸಬ್ಬತ್ತಿನ ವರುಷಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು. ಏಳು ಸಬ್ಬತ್ತಿನ ವರುಷಗಳ ಕಾಲಾವಧಿಯು ನಿನಗೆ ನಾಲ್ವತ್ತೊಂಭತ್ತು ವರುಷಗಳಾಗಿರುವವು.

Cross references

ಆದಿಕಾಂಡ 2:2

ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.

ಲೇವ್ಯಕಾಂಡ 23:15

ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು.

ಅಂಕೆಗಳ ಪುಸ್ತಕ 36:4

ಇಸ್ರಾಯೇಲ್‌ ಮಕ್ಕಳಿಗೆ ಜೂಬಿಲಿ ಯಾದರೂ ಅವರ ಸ್ವಾಸ್ತ್ಯವು ಅವರನ್ನು ತಕ್ಕೊಳ್ಳುವವರ ಗೋತ್ರದ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು. ಹಾಗೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಗೋತ್ರದ ಸ್ವಾಸ್ತ್ಯದಿಂದ ತೆಗೆಯಲ್ಪಡುವದು.

ಕೀರ್ತನೆಗಳು 89:16

ನಿನ್ನ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು ನಿನ್ನ ನೀತಿಯಲ್ಲಿ ಅವರು ಉನ್ನತಕ್ಕೇರು ವರು.

Interlinear

Choose Theme