ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೇ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸ ಬೇಕು; ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.
Cross references
ಹೀಗೆ ಪರಿಶುದ್ಧ ಸ್ಥಳದಲ್ಲಿಯೂ ಸಭೆಯ ಗುಡಾರದಲ್ಲಿಯೂ ಯಜ್ಞವೇದಿಗೂ ಪ್ರಾಯಶ್ಚಿತ್ತವನ್ನು ಮಾಡಿ ಮುಗಿಸಿದ ಮೇಲೆ ಅವನು ಒಂದು ಜೀವವುಳ್ಳ ಆಡನ್ನು ತರಬೇಕು.
ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.
ಯಾಕಂದರೆ ನೀವು ಕರ್ತನ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತ ವನ್ನು ಮಾಡುವನು.
ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ--ಏಳನೆಯ ತಿಂಗಳಿನ ಮೊದಲನೆಯ ದಿವಸ ದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥ ವಾದ ಸಬ್ಬತ್ತೂ ಪರಿಶುದ್ಧ ಸಭೆಯ ಕೂಟವೂ ಇರ ಬೇಕು.
ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು.
ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.
ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.
ಜೂಬಿಲಿ ಸಂವತ್ಸರದಲ್ಲಿ ಆ ಹೊಲದ ಭೂಮಿಯ ಸ್ವಾಸ್ತ್ಯವುಂಟಾದವನಿಗೆ ಅಂದರೆ ಇವನು ಯಾವನಿಂದ ಕೊಂಡುಕೊಂಡನೋ ಅವನಿಗೆ ತಿರುಗಿ ಹಿಂದಕ್ಕೆ ಕೊಡಬೇಕು.
ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
ಇಸ್ರಾಯೇಲ್ ಮಕ್ಕಳಿಗೆ ಜೂಬಿಲಿ ಯಾದರೂ ಅವರ ಸ್ವಾಸ್ತ್ಯವು ಅವರನ್ನು ತಕ್ಕೊಳ್ಳುವವರ ಗೋತ್ರದ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು. ಹಾಗೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಗೋತ್ರದ ಸ್ವಾಸ್ತ್ಯದಿಂದ ತೆಗೆಯಲ್ಪಡುವದು.
ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.
ನಿನ್ನ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು ನಿನ್ನ ನೀತಿಯಲ್ಲಿ ಅವರು ಉನ್ನತಕ್ಕೇರು ವರು.
ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.