Home Bibles ಲೇವ್ಯಕಾಂಡ 26:18 · ಕನ್ನಡ ಬೈಬಲ್
ಲೇವ್ಯಕಾಂಡ 26:18 · ಕನ್ನಡ ಬೈಬಲ್

ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.

Cross references

ನಿರ್ಗಮಕಾಂಡ 9:14

ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.

ಲೇವ್ಯಕಾಂಡ 26:21

ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.

ಲೇವ್ಯಕಾಂಡ 26:24

ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.

ಲೇವ್ಯಕಾಂಡ 26:28

ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.

1 ಸಮುವೇಲ 2:5

ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು.

ಕೀರ್ತನೆಗಳು 119:164

ನಿನ್ನ ನೀತಿಯ ವಿಧಿಗಳ ನಿಮಿತ್ತ ದಿವಸಕ್ಕೆ ಏಳು ಸಾರಿ ನಿನ್ನನ್ನು ಸ್ತುತಿಸುತ್ತೇನೆ.

ಸಾಮೇತಿಗಳು 24:16

ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.

ಯೆಶಾಯ 5:25

ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.

ಯೆರೆಮಿಯ 14:4

ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.

ದಾನಿಯೇಲ 3:19

ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್‌ ಮೇಷಕ್‌ಅಬೇದ್‌ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.

Interlinear

Choose Theme