Home Bibles ಲೇವ್ಯಕಾಂಡ 26:22 · ಕನ್ನಡ ಬೈಬಲ್
ಲೇವ್ಯಕಾಂಡ 26:22 · ಕನ್ನಡ ಬೈಬಲ್

ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.

Cross references

ಲೇವ್ಯಕಾಂಡ 26:6

ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.

ದ್ವಿತೀಯೋಪದೇಶಕಾಂಡ 32:24

ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.

ನ್ಯಾಯಾಧಿಪತಿಗಳು 5:6

ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.

2 ಅರಸುಗಳು 2:24

ಅವನು ಹಿಂದಿರುಗಿ ಅವರನ್ನು ನೋಡಿ--ಕರ್ತನ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯೊಳಗಿಂದ ಎರಡು ಹೆಣ್ಣು ಕರಡಿಗಳು ಹೊರಟು ಅವರಲ್ಲಿ ನಾಲ್ವತ್ತೆರಡು ಹುಡುಗ ರನ್ನು ಸೀಳಿಬಿಟ್ಟವು.ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.

2 ಅರಸುಗಳು 17:25

ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.

2 ದಿನವೃತ್ತಾಂತ 15:5

ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು.

ಯೆಶಾಯ 24:6

ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.

ಯೆಶಾಯ 33:8

ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು.

ಯೆರೆಮಿಯ 15:3

ಈ ಸ್ಥಳದಲ್ಲಿ ಹುಟ್ಟಿರುವ ಕುಮಾರ ಕುಮಾರ್ತೆ ರಯರನ್ನು ಕುರಿತಾಗಿಯೂ ಅವರನ್ನು ಹೆತ್ತ ತಾಯಿಗಳನ್ನು ಈ ದೇಶದಲ್ಲಿ ಅವರನ್ನು ಪಡೆದ ತಂದೆಗಳನ್ನು ಕುರಿ ತಾಗಿಯೂ ಕರ್ತನು ಹೀಗೆ ಹೇಳುತ್ತಾನೆ--

ವಿಲಾಪಗಳು 1:4

ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.

ಯೆಹೆಜ್ಕೇಲ 5:17

ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.

ಯೆಹೆಜ್ಕೇಲ 14:15

ನಾನು ದುಷ್ಟ ಮೃಗಗಳನ್ನು ದೇಶದಲ್ಲಿ ಹಾದು ಹೋಗುವಂತೆ ಮಾಡಿ ಅದನ್ನು ನಿರ್ಜನಪಡಿಸಿ, ಹಾಳು ಮಾಡಿ ಯಾರೂ ಮೃಗಗಳ ನಿಮಿತ್ತ ಹಾದು ಹೋಗದಂತೆ ಮಾಡಿದರೆ

ಯೆಹೆಜ್ಕೇಲ 14:21

ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?

ಯೆಹೆಜ್ಕೇಲ 33:28

ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು.

ಮೀಕ 3:12

ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.

ಜೆಕರ್ಯ 7:14

ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.

Interlinear

Choose Theme