ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
Cross references
ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ
ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
ತಿನ್ನತಕ್ಕ ಕುರಿಗಳ ಹಾಗೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀ; ಅನ್ಯಜನಾಂಗ ಗಳಲ್ಲಿ ನಮ್ಮನ್ನು ಚದರಿಸಿದ್ದೀ.
ನಿನ್ನ ಜನರನ್ನು ಕ್ರಯವಿಲ್ಲದೆ ಮಾರಿಬಿಡುತ್ತೀ. ಅವರ ಬೆಲೆಯಿಂದ ನೀನು ನಿನ್ನ ಸಂಪತ್ತನ್ನು ಹೆಚ್ಚು ಮಾಡಲಿಲ್ಲ.
ಅವರ ಸಂತತಿಯನ್ನು ಜನಾಂಗಗಳಲ್ಲಿ ಕೆಡವಿ, ಅವರನ್ನು ದೇಶಗಳಲ್ಲಿ ಚದರಿಸುವದಕ್ಕೂ ಆತನು ತನ್ನ ಕೈಯನ್ನು ಅವರ ಮೇಲೆತ್ತಿದನು.
ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.
ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!
ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.
ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು.
ಕರ್ತನ ಕೋಪವು ಅವರನ್ನು ವಿಭಾಗಿಸಿತು; ಆತನು ಇನ್ನು ಅವರನ್ನು ಲಕ್ಷಿಸುವದಿಲ್ಲ; ಅವರು ಯಾಜಕರನ್ನು ಗೌರವಿಸಲಿಲ್ಲ; ಅವರು ಹಿರಿಯರಿಗೆ ದಯೆತೋರಿ ಸಲಿಲ್ಲ.
ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ ಅವನ ಎಲ್ಲಾ ಸೈನ್ಯಗಳನ್ನೂ ಎಲ್ಲಾ ದಿಕ್ಕುಗಳಿಗೆ ಚದರಿಸಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವವು. ದೇಶವು ನಿರ್ಜನವಾಗುವದು; ಆಗ ನಾನೇ ಕರ್ತ ನೆಂದು ನೀವು ತಿಳಿಯುವಿರಿ.
ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶಗಳಲ್ಲಿ ಹರಡಿಸುತ್ತೇನೆಂದೂ ಅರಣ್ಯದಲ್ಲಿ ಅವರ ಮೇಲೆ ಕೈ ಎತ್ತಿದೆನು;
ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.
ಅವರು ಹಾಳಾದ ದೇಶವನ್ನು ಬಿಟ್ಟು ಹೋಗುವರು; ಐಗುಪ್ತವು ಅವರನ್ನು ಕೂಡಿಸುವದು, ಮೋಫ್ ಪಟ್ಟಣವು ಅವರನ್ನು ಹೂಣುವದು; ಅಪೇಕ್ಷಿ ಸಲ್ಪಟ್ಟ ಅವರ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು. ತುರುಚಿಯ ಗಿಡಗಳು ಅವರನ್ನು ಆವರಿಸಿಕೊಂಡಿವೆ; ಮುಳ್ಳುಗಳು ಅವರ ಗುಡಾರಗಳಲ್ಲಿ ಇರುವವು.
ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.