ಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು.
Cross references
ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.
ತಿರಿಗಿ ಸಲ್ಲಿಸುವದಕ್ಕೆ ಅವನಿಗೆ ಆಗದಿದ್ದರೆ ಅವನು ಮಾರಿದ್ದು ಸಂಭ್ರಮದ ವರುಷದ ವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು; ಸಂಭ್ರಮದ ವರುಷದಲ್ಲಿ ಅದು ಬಿಡುಗಡೆ ಯಾಗಬೇಕು, ಅವನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.
ಆದರೆ ಸುತ್ತಲೂ ಗೋಡೆಗಳಿಲ್ಲದ ಹಳ್ಳಿಗಳಲ್ಲಿಯ ಮನೆಗಳು ದೇಶದ ಭೂಮಿಯೊಂದಿಗೆ ಲೆಕ್ಕಿಸಲ್ಪಡಬೇಕು. ಅವುಗಳಿಗೆ ಬಿಡುಗಡೆ ಇರಬೇಕು; ಸಂಭ್ರಮ ವರುಷದಲ್ಲಿ ಅವು ಬಿಡುಗಡೆಯಾಗಬೇಕು.
ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ.
ಇಸ್ರಾಯೇಲ್ಯರಲ್ಲಿ ಆಣೆಯೊಂದಿಗೆ ಒಪ್ಪಿಸಿದ್ದೆಲ್ಲಾ ನಿನ್ನದಾಗಿರಬೇಕು.
ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು.
ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ಯೋಚನೆಯ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ ಅವನ ಆಸ್ತಿಯಲ್ಲಾ ದಂಡವಾಗಿ ತಕ್ಕೊಳ್ಳಲ್ಪಡುವದೆಂದೂ ಅವನು ಸೆರೆಯಾಗಿ ಒಯ್ಯಲ್ಪಟ್ಟವರ ಕೂಟದಿಂದ ಹೊರಗೆ ಹಾಕಲ್ಪಡುವನೆಂದೂ ಸಾರಿದರು.
ಆಹಾರದ ಅರ್ಪಣೆಯನ್ನು ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ಅವರು ತಿನ್ನಬೇಕು; ಇಸ್ರಾಯೇಲಿನಲ್ಲಿ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.