ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ.
Cross references
ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.
ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.
ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು.
ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ:
ಕರ್ತನ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಳಿಗಾಗಿ ಹೋರಿಯನ್ನೂ ಟಗರನ್ನೂ ಸಹ ತೆಗೆದುಕೊಳ್ಳಬೇಕು; ಆಹಾರದ ಅರ್ಪಣೆಯು ಎಣ್ಣೆಯೊಂದಿಗೆ ಬೆರೆತಿರಬೇಕು; ಈ ದಿನವೇ ಕರ್ತನು ನಿಮಗೆ ಕಾಣಿಸಿಕೊಳ್ಳುವನು.
ಇಸ್ರಾಯೇಲ್ ಮಕ್ಕಳು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಕರ್ತನಿಗೆ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಕರ್ತನಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.
ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು;
ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು.
ಅವನು ಕರ್ತನಿಗೆ ತನ್ನ ಅರ್ಪಣೆಯನ್ನು ಅರ್ಪಿಸ ಬೇಕು; ಅದೇನಂದರೆ, ದಹನ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಟಗರಿನ ಮರಿಯನ್ನೂ ಪಾಪದ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಒಂದು ಕುರಿಮರಿಯನ್ನೂ ಸಮಾಧಾನದ ಬಲಿಗಾಗಿ ದೋಷವಿಲ್ಲದ ಒಂದು ಟಗರನ್ನೂ ತರಬೇಕು.
ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾನಾ ದಾಬನ ಮಗನಾದ ನಹಶೋನನ ಅರ್ಪಣೆಯು.
ಆಗ ಇಸ್ರಾಯೇಲ್ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ
ಜನರು ಮಾರನೇ ದಿವಸ ಉದಯ ದಲ್ಲಿ ಎದ್ದು, ಅಲ್ಲಿ ಬಲಿಪೀಠವನ್ನು ಕಟ್ಟಿ ದಹನಬಲಿ ಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.
ನಾಚಿಕೆಯಿಲ್ಲದೆ --ನನ್ನಲ್ಲಿ ಸಮಾಧಾನ ಅರ್ಪಣೆಗಳು ಇವೆ; ಈ ದಿವಸ ನನ್ನ ಪ್ರಮಾಣಗಳನ್ನು ನಾನು ಸಲ್ಲಿಸಿದ್ದೇನೆ.
ಇಸ್ರಾಯೇಲಿನ ನೀರುಗಳ ಮೇವುಗಳಿಂದ ಮೇದಿ ರುವ ಇನ್ನೂರರೊಳಗೆ ಒಂದು ಕುರಿಮರಿಯನ್ನು ಮಂದೆಯೊಳಗಿಂದ ಅರ್ಪಣೆಗಾಗಿಯೂ ದಹನಬಲಿ ಗಾಗಿಯೂ ಸಮಾಧಾನ ಯಜ್ಞಕ್ಕಾಗಿಯೂ ಅವರಿ ಗೋಸ್ಕರ ಸಮಾಧಾನಕ್ಕಾಗಿ ಅರ್ಪಿಸಬೇಕೆಂದು ದೇವ ರಾದ ಕರ್ತನು ಹೇಳುತ್ತಾನೆ.
ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ.
ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?
ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.