ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ
Cross references
ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.
ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.
ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
ಆದದರಿಂದ ಆರೋನನು ಯಜ್ಞವೇದಿಯ ಕಡೆಗೆ ಹೋಗಿ ತನಗಾಗಿ ಪಾಪದ ಬಲಿಯ ಕರುವನ್ನು ವಧಿಸಿದನು.
ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು.
ಹಸುವನ್ನು ಅದರ ಚರ್ಮ ಮಾಂಸ ರಕ್ತ ಸಗಣಿಯ ಸಹಿತವಾಗಿ ಅವನ ಕಣ್ಣುಗಳಿಗೆದುರಾಗಿ ಸುಡಿಸಬೇಕು.
ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;