Home Bibles ಲೇವ್ಯಕಾಂಡ 4:21 · ಕನ್ನಡ ಬೈಬಲ್
ಲೇವ್ಯಕಾಂಡ 4:21 · ಕನ್ನಡ ಬೈಬಲ್

ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.

Cross references

ನಿರ್ಗಮಕಾಂಡ 29:14

ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.

ಲೇವ್ಯಕಾಂಡ 4:11

ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ

ಲೇವ್ಯಕಾಂಡ 6:11

ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ ಬೇರೆ ಉಡುಪುಗಳನ್ನು ಧರಿಸಿಕೊಂಡು ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

ಲೇವ್ಯಕಾಂಡ 6:23

ಯಾಜಕನಿಗಾಗಿರುವ ಪ್ರತಿ ಯೊಂದು ಆಹಾರ ಬಲಿ ಸಂಪೂರ್ಣವಾಗಿ ಸುಡಲ್ಪಡ ಬೇಕು; ಅದನ್ನು ತಿನ್ನಬಾರದು ಅಂದನು.

ಲೇವ್ಯಕಾಂಡ 8:17

ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.

ಲೇವ್ಯಕಾಂಡ 16:15

ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.

ಲೇವ್ಯಕಾಂಡ 16:21

ಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್‌ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.

ಲೇವ್ಯಕಾಂಡ 16:27

ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು.

2 ದಿನವೃತ್ತಾಂತ 29:21

ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.

ಎಜ್ರಾ 8:35

ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್‌ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.

ಯೆಹೆಜ್ಕೇಲ 45:22

ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ಪಾಪಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು.

ಮತ್ತಾಯ 20:28

ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.

2 ಕೊರಿಂಥದವರಿಗೆ 5:21

ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.

1 ತಿಮೋಥೆಯ 2:5

ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;

Interlinear

Choose Theme