ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Cross references
ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.
ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.
ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.
ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.
ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.
ಆರೋನನೂ ಅವನ ಕುಮಾರರೂ ಅಭಿಷಿಕ್ತರಾದ ದಿನದಲ್ಲಿ ಕರ್ತನಿಗೆ ಸಮರ್ಪಿಸಬೇಕಾದ ಬಲಿಯು ಇದೇ; ಒಂದು ಎಫದ ಹತ್ತನೆಯ ಭಾಗ ನಯವಾದ ಹಿಟ್ಟಿನಲ್ಲಿ ನಿರಂತರವಾಗಿರುವ ಆಹಾರ ಬಲಿಗಾಗಿ ಮುಂಜಾನೆ ಅದರಲ್ಲಿ ಅರ್ಧ ಭಾಗವನ್ನೂ ರಾತ್ರಿ ಅದರಲ್ಲಿ ಅರ್ಧ ಭಾಗವನ್ನೂ ಅರ್ಪಿಸಬೇಕು.
ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
ಆಗ ಯಾಜಕನು ಒಂದನ್ನು ಪಾಪಬಲಿ ಗಾಗಿ ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು; ಯಾಜಕನು ಅವನ ಸ್ರಾವಕ್ಕೋಸ್ಕರ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.
ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.
ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.
ಯಾಜಕನು ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು.
ತಿಳಿಯದೆ ಪಾಪಮಾಡಿ ದಂಥ ಆ ಪಾಪಮಾಡಿದವನಿಗೋಸ್ಕರ ಯಾಜಕನು ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅದು ಪರಿಹಾರವಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.
ಎರಡನೇ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ಪಾಪ ಬಲಿಯಾಗಿ ಅರ್ಪಿಸ ಬೇಕು; ಅವರು ಯಜ್ಞವೇದಿಯನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು.