ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.
Cross references
ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು.
ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು.
ಅವನು ತನ್ನ ಕೈಯನ್ನು ಪಾಪದ ಬಲಿಯ ಮೇಲಿಟ್ಟು ಆ ಪಾಪದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.
ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.
ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಅತಿಕ್ರಮದ ಬಲಿಯನ್ನು ವಧಿಸಬೇಕು: ಅವನು ಅದರ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸ ಬೇಕು.
ಅರಸನ ಮುಂದೆಯೂ ಸಭೆಯ ಮುಂದೆಯೂ ಪಾಪದ ಬಲಿಯಾದ ಮೇಕೆ ಹೋತ ಗಳನ್ನು ಹತ್ತಿರ ತಕ್ಕೊಂಡು ಬಂದು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು.