Home Bibles ಲೇವ್ಯಕಾಂಡ 5:7 · ಕನ್ನಡ ಬೈಬಲ್
ಲೇವ್ಯಕಾಂಡ 5:7 · ಕನ್ನಡ ಬೈಬಲ್

ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು.

Cross references

ಲೇವ್ಯಕಾಂಡ 1:14

ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು.

ಲೇವ್ಯಕಾಂಡ 5:8

ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಪಾಪದ ಬಲಿಗೆ ತಂದಿರುವದನ್ನು ಮೊದಲು ಸಮರ್ಪಿಸಿ ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು, ಅದನ್ನು ವಿಭಾಗಿಸಬಾರದು.

ಲೇವ್ಯಕಾಂಡ 5:11

ಆದರೆ ಅವನು ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವದಕ್ಕೆ ಅಶಕ್ತನಾಗಿದ್ದರೆ ಪಾಪಮಾಡಿದವನು ತನ್ನ ಸಮರ್ಪಣೆ ಗಾಗಿ ಒಂದು ಎಫದ ಹತ್ತನೆಯ ಭಾಗದಷ್ಟು ನಯ ವಾದ ಹಿಟ್ಟನ್ನು ಪಾಪದ ಬಲಿಗಾಗಿ ತರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಅದು ಪಾಪದ ಬಲಿಯಾಗಿದೆ.

ಲೇವ್ಯಕಾಂಡ 9:3

ನೀನು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು.

ಲೇವ್ಯಕಾಂಡ 12:8

ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.

ಲೇವ್ಯಕಾಂಡ 14:21

ಅವನು ಬಡವನಾಗಿದ್ದರೆ ಅಷ್ಟೊಂದು ತರುವದಕ್ಕೆ ಆಗದಿದ್ದರೆ ತನ್ನ ಪ್ರಾಯಶ್ಚಿತ್ತ ಅಪರಾಧದ ಬಲಿಗಾಗಿ ಆಡಿಸುವದಕ್ಕೆ ಒಂದು ಕುರಿ ಮರಿಯನ್ನೂ ಎಣ್ಣೆಬೆರೆಸಿದ ಹತ್ತರಲ್ಲೊಂದು ಭಾಗ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ

ಲೇವ್ಯಕಾಂಡ 14:22

ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು.

ಲೇವ್ಯಕಾಂಡ 14:31

ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು.

ಲೇವ್ಯಕಾಂಡ 15:14

ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.

ಲೇವ್ಯಕಾಂಡ 15:15

ಆಗ ಯಾಜಕನು ಒಂದನ್ನು ಪಾಪಬಲಿ ಗಾಗಿ ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು; ಯಾಜಕನು ಅವನ ಸ್ರಾವಕ್ಕೋಸ್ಕರ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.

ಲೇವ್ಯಕಾಂಡ 15:30

ಯಾಜಕನು ಒಂದನ್ನು ಪಾಪಬಲಿಗಾ ಗಿಯೂ ಇನ್ನೊಂದನ್ನು ದಹನಬಲಿಗಾಗಿಯೂ ಸಮ ರ್ಪಿಸಬೇಕು; ಯಾಜಕನು ಅವಳಿಗಾಗಿ ಅವಳ ಅಶುದ್ಧ ತೆಯ ಸ್ರಾವದ ವಿಷಯದಲ್ಲಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.

ಲೇವ್ಯಕಾಂಡ 16:5

ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.

ಲೇವ್ಯಕಾಂಡ 27:8

ಆದರೆ ನೀನು ನೇಮಿಸಿದ ಕ್ರಯವನ್ನು ಕೂಡ ಕೊಡದಷ್ಟು ಅವನು ಬಡವನಾಗಿದ್ದರೆ ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿ ಸಬೇಕು. ಪ್ರಮಾಣಮಾಡಿದವನ ಸಂಪತ್ತಿಗೆ ಸರಿಯಾಗಿ ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು.

ಅಂಕೆಗಳ ಪುಸ್ತಕ 6:11

ಯಾಜಕನು ಒಂದನ್ನು ಪಾಪದ ಬಲಿ ಯಾಗಿಯೂ ಇನ್ನೊಂದನ್ನು ಹೋಮವಾಗಿಯೂ ಅರ್ಪಿಸಿ ಅವನು ಸತ್ತವನಲ್ಲಿ ಪಾಪಮಾಡಿದ್ದರಿಂದ ಅವನಿಗೋಸ್ಕರ ಪಾಪವನ್ನು ಮುಚ್ಚಿ ಆ ದಿವಸದಲ್ಲಿ ಅವನ ತಲೆಯನ್ನು ಪರಿಶುದ್ಧಮಾಡಬೇಕು.

ಮತ್ತಾಯ 3:16

ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.

ಮತ್ತಾಯ 10:16

ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.

ಲೂಕ 2:24

ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.

2 ಕೊರಿಂಥದವರಿಗೆ 8:12

ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.

ಹೆಬ್ರಿಯರಿಗೆ 10:6

ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ;

ಯಾಕೋಬ 2:5

ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

Interlinear

Choose Theme