Home Bibles ಲೇವ್ಯಕಾಂಡ 7:17 · ಕನ್ನಡ ಬೈಬಲ್
ಲೇವ್ಯಕಾಂಡ 7:17 · ಕನ್ನಡ ಬೈಬಲ್

ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು.

Cross references

ಆದಿಕಾಂಡ 22:4

ಮೂರನೆಯ ದಿನದಲ್ಲಿ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ಆ ಸ್ಥಳವನ್ನು ದೂರದಿಂದ ನೋಡಿದನು.

ನಿರ್ಗಮಕಾಂಡ 12:10

ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ನಿರ್ಗಮಕಾಂಡ 19:11

ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.

ನಿರ್ಗಮಕಾಂಡ 29:14

ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.

ಲೇವ್ಯಕಾಂಡ 6:22

ಅವನ ಕುಮಾರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು; ಇದು ಕರ್ತನಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ; ಅದು ಸಂಪೂರ್ಣವಾಗಿ ಸುಡಲ್ಪಡಬೇಕು.

ಲೇವ್ಯಕಾಂಡ 10:16

ಆಗ ಮೋಶೆಯು ಶ್ರದ್ಧೆಯಿಂದ ಪಾಪದ ಬಲಿಯ ಮೇಕೆಯನ್ನು ಹುಡುಕಿದಾಗ ಅಗೋ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಕುಮಾರರಾದ ಎಲ್ಲಾಜಾರನ ಮೇಲೆಯೂ ಈತಾಮಾರನ ಮೇಲೆಯೂ ಕೋಪಗೊಂಡು ಹೇಳಿದ್ದೇನಂದರೆ--

ಲೇವ್ಯಕಾಂಡ 19:6

ಅದನ್ನು ನೀವು ಸಮರ್ಪಿಸಿದ ದಿನ ದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು; ಆದರೆ ಅದು ಮೂರನೆಯ ದಿನದ ವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.

ಲೇವ್ಯಕಾಂಡ 19:7

ಆದರೆ ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ ಅದು ಅಸಹ್ಯವಾದದ್ದು; ಅದು ಅಂಗೀಕೃತವಾಗುವದಿಲ್ಲ.

ಹೊಶೇಯ 6:2

ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.

1 ಕೊರಿಂಥದವರಿಗೆ 15:4

ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.

Interlinear

Choose Theme