ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.
Cross references
ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.
ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.
ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.
ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.
ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.
ಮೋಶೆಯು ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಸನ್ನಿಧಿ ಯಲ್ಲಿ ಆಡಿಸುವ ಸಮರ್ಪಣೆಗಾಗಿ ಅದನ್ನು ಆಡಿಸಿ ದನು; ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿ ಷ್ಠಿತ ಟಗರು ಮೋಶೆಯ ಪಾಲಾಗಿತ್ತು.
ಆಡಿಸುವ ಬಲಿಯ ಎದೆಯೂ ಬಲ ಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನ ದಾಗಿರಬೇಕು.