Home Bibles ಲೇವ್ಯಕಾಂಡ 7:32 · ಕನ್ನಡ ಬೈಬಲ್
ಲೇವ್ಯಕಾಂಡ 7:32 · ಕನ್ನಡ ಬೈಬಲ್

ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು.

Cross references

ಲೇವ್ಯಕಾಂಡ 7:34

ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.

ಲೇವ್ಯಕಾಂಡ 8:25

ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು.

ಲೇವ್ಯಕಾಂಡ 9:21

ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು.

ಲೇವ್ಯಕಾಂಡ 10:14

ನೀನೂ ನಿನ್ನೊಂದಿಗೆ ನಿನ್ನ ಕುಮಾರರೂ ಕುಮಾರ್ತೆಯರೂ ಆಡಿಸುವ ಎದೆಯ ಭಾಗವನ್ನೂ ಪ್ರತ್ಯೇಕಿಸಿದ ಭುಜವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು; ಅವು ಇಸ್ರಾಯೇಲ್‌ ಮಕ್ಕಳ ಸಮಾಧಾನದ ಬಲಿಯ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಸಲ್ಲುವವುಗಳಾಗಿವೆ.

ಅಂಕೆಗಳ ಪುಸ್ತಕ 6:20

ಯಾಜಕನು ಅವುಗಳನ್ನು ಆಡಿಸುವ ಅರ್ಪಣೆಗಾಗಿ ಕರ್ತನ ಎದುರಿ ನಲ್ಲಿ ಆಡಿಸಬೇಕು. ಆಡಿಸುವ ಎದೆಯ ಸಂಗಡಲೂ ಎತ್ತುವ ಮುಂದೊಡೆಯ ಸಂಗಡಲೂ ಅದು ಯಾಜಕ ನಿಗೆ ಪರಿಶುದ್ಧವಾಗಿದೆ. ಆ ಮೇಲೆ ನಾಜೀರನು ದ್ರಾಕ್ಷಾ ರಸವನ್ನು ಕುಡಿಯಬಹುದು.

ಅಂಕೆಗಳ ಪುಸ್ತಕ 18:18

ಆಡಿಸುವ ಬಲಿಯ ಎದೆಯೂ ಬಲ ಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನ ದಾಗಿರಬೇಕು.

ದ್ವಿತೀಯೋಪದೇಶಕಾಂಡ 18:3

ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು.

1 ಸಮುವೇಲ 9:24

ಆಗ ಅಡಿಗೆಯವನು ಒಂದು ಮುಂದೊಡೆಯನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಅದನ್ನು ಸೌಲನ ಮುಂದೆ ಇಟ್ಟನು. ಆಗ ಸಮುವೇಲನು ಸೌಲನಿಗೆ--ಇಗೋ, ಇದು ನಿನ ಗೋಸ್ಕರ ಪ್ರತ್ಯೇಕಿಸಿದ್ದು ತೆಗೆದುಕೊಂಡು ತಿನ್ನು. ಯಾಕಂದರೆ ನಾನು ಜನರನ್ನು ಕರೆದಿದ್ದೇನೆಂದು ಹೇಳಿದ ಕಾಲದಿಂದ ಈ ವರೆಗೂ ನಿನಗೋಸ್ಕರ ಇಡಲ್ಪಟ್ಟಿತ್ತು ಅಂದನು. ಹಾಗೆಯೇ ಸೌಲನು ಆ ದಿವಸದಲ್ಲಿ ಸಮುವೇಲನ ಸಂಗಡ ಊಟಮಾಡಿದನು.

1 ಕೊರಿಂಥದವರಿಗೆ 9:13

ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?

Interlinear

Choose Theme