Home Bibles ಲೇವ್ಯಕಾಂಡ 8:11 · ಕನ್ನಡ ಬೈಬಲ್
ಲೇವ್ಯಕಾಂಡ 8:11 · ಕನ್ನಡ ಬೈಬಲ್

ಅವನು ಅದರಿಂದ ಯಜ್ಞವೇದಿಯ ಮೇಲೆ ಏಳು ಸಾರಿ ಚಿಮುಕಿಸಿ ಯಜ್ಞ ವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಗಂಗಾಳ ವನ್ನೂ ಪೀಠವನ್ನೂ ಅಭಿಷೇಕಿಸಿ ಅವುಗಳನ್ನು ಪವಿತ್ರ ಮಾಡಿದನು.

Cross references

ನಿರ್ಗಮಕಾಂಡ 4:6

ಇದಲ್ಲದೆ ಕರ್ತನು ಅವನ ಸಂಗಡ ಇನ್ನೂ ಮಾತನಾಡಿ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆಯಲು ಇಗೋ, ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು.

ನಿರ್ಗಮಕಾಂಡ 4:17

ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.

ನಿರ್ಗಮಕಾಂಡ 16:14

ಬಿದ್ದಿದ್ದ ಮಂಜು ಹೋದ ಮೇಲೆ ಇಗೋ, ಗಟ್ಟಿ ಯಾದ ಪದಾರ್ಥವು ಮಂಜಿನ ಹನಿಯಷ್ಟು ಚಿಕ್ಕ ದಾದದ್ದೂ ಗುಂಡಾದದ್ದೂ ಅರಣ್ಯದ ಭೂಮಿಯ ಮೇಲೆ ಹರಡಿತ್ತು.

ನಿರ್ಗಮಕಾಂಡ 16:19

ಮೋಶೆ ಅವರಿಗೆ--ಇದರಲ್ಲಿ ಯಾರೂ ಮರುದಿನದ ವರೆಗೆ ಇಟ್ಟುಕೊಳ್ಳಬಾರದು ಎಂದು ಹೇಳಿದನು.

ನಿರ್ಗಮಕಾಂಡ 30:29

ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು.

ಲೇವ್ಯಕಾಂಡ 4:6

ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.

ಲೇವ್ಯಕಾಂಡ 4:17

ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು.

ಲೇವ್ಯಕಾಂಡ 14:16

ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ ಬೆರಳಿನಿಂದ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸ ಬೇಕು.

ಯೆಶಾಯ 52:15

ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.

ಯೆಹೆಜ್ಕೇಲ 36:25

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.

ತೀತ 3:6

ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.

Interlinear

Choose Theme