Home Bibles ಲೇವ್ಯಕಾಂಡ 9:5 · ಕನ್ನಡ ಬೈಬಲ್
ಲೇವ್ಯಕಾಂಡ 9:5 · ಕನ್ನಡ ಬೈಬಲ್

ಮೋಶೆಯು ಆಜ್ಞಾಪಿಸಿದವುಗಳನ್ನು ಅವರು ಸಭೆಯ ಗುಡಾರದ ಮುಂದೆ ತಂದರು; ಸಭೆಯೆಲ್ಲವೂ ಹತ್ತಿರ ಬಂದು ಕರ್ತನ ಮುಂದೆ ನಿಂತಿತು.

Cross references

ನಿರ್ಗಮಕಾಂಡ 19:17

ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು.

ದ್ವಿತೀಯೋಪದೇಶಕಾಂಡ 31:12

ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.

1 ದಿನವೃತ್ತಾಂತ 15:3

ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.

2 ದಿನವೃತ್ತಾಂತ 5:2

ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಸೊಲೊಮೋನನು ಇಸ್ರಾಯೇಲಿನ ಮಕ್ಕಳ ಲ್ಲಿರುವ ಪ್ರಭುಗಳಾದ ತಂದೆಗಳಾಗಿರುವ ಇಸ್ರಾಯೇ ಲಿನ ಹಿರಿಯರನ್ನೂ ಗೋತ್ರಗಳ ಯಜಮಾನರನ್ನೂ ಯೆರೂಸಲೇಮಿಗೆ ಕೂಡಿ ಬರಮಾಡಿದನು.

ನೆಹೆಮ್ಯ 8:1

ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.

Interlinear

Choose Theme