Home Bibles ಲೂಕ 1:59 · ಕನ್ನಡ ಬೈಬಲ್
ಲೂಕ 1:59 · ಕನ್ನಡ ಬೈಬಲ್

ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.

Cross references

ಆದಿಕಾಂಡ 17:12

ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ

ಆದಿಕಾಂಡ 21:3

ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು.

ಲೇವ್ಯಕಾಂಡ 12:3

ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.

ಲೂಕ 2:21

ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.

ಅಪೋಸ್ತಲರ ಕೃತ್ಯಗಳು 7:8

ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.

ಫಿಲಿಪ್ಪಿಯವರಿಗೆ 3:5

ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್‌ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;

Interlinear

Choose Theme