Home Bibles ಲೂಕ 10:28 · ಕನ್ನಡ ಬೈಬಲ್
ಲೂಕ 10:28 · ಕನ್ನಡ ಬೈಬಲ್

ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು.

Cross references

ಲೇವ್ಯಕಾಂಡ 18:5

ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.

ನೆಹೆಮ್ಯ 9:29

ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.

ಯೆಹೆಜ್ಕೇಲ 20:11

ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.

ಯೆಹೆಜ್ಕೇಲ 20:13

ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್‌ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.

ಯೆಹೆಜ್ಕೇಲ 20:21

ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು.

ಮತ್ತಾಯ 19:17

ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.

ಮಾರ್ಕ 12:34

ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.

ಲೂಕ 7:43

ಅದಕ್ಕೆ ಸೀಮೋನನು ಪ್ರತ್ಯುತ್ತರವಾಗಿ--ಯಾರಿಗೆ ಅವನು ಬಹಳವಾಗಿ ಕ್ಷಮಿಸಿದನೋ ಅವನೇ ಎಂದು ನಾನು ನೆನಸುತ್ತೇನೆ ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ತೀರ್ಪು ಮಾಡಿದಿ ಅಂದನು.

ರೋಮಾಪುರದವರಿಗೆ 3:19

ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.

ರೋಮಾಪುರದವರಿಗೆ 10:4

ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.

ಗಲಾತ್ಯದವರಿಗೆ 3:12

ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ.

Interlinear

Choose Theme