ಲೂಕ 10:35 · ಕನ್ನಡ ಬೈಬಲ್
ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು.
Cross references
ಸಾಮೇತಿಗಳು 19:17
ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
ಮತ್ತಾಯ 20:2
ಅವನು ದಿನಕ್ಕೆ ಒಂದು ಪಾವಲಿಯಂತೆ (ಪೆನ್ನಿ) ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿ ಕೊಂಡು ತನ್ನ ದ್ರಾಕ್ಷೇತೋಟಕ್ಕೆ ಅವರನ್ನು ಕಳುಹಿಸಿ ಕೊಟ್ಟನು.
ಲೂಕ 14:13
ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ;
ರೋಮಾಪುರದವರಿಗೆ 16:23
ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.