ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.
Cross references
ಆದರೆ ಅದು ಯೋನನಿಗೆ ತುಂಬಾಕರೆಕರೆಯಾಗಿ ಅವನಿಗೆ ಬಹು ಕೋಪ ಬಂತು.
ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು.
ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.
ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ.
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.