ಲೂಕ 11:37 · ಕನ್ನಡ ಬೈಬಲ್
ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು.
Cross references
ಲೂಕ 7:36
ಆಗ ಫರಿಸಾಯರಲ್ಲಿ ಒಬ್ಬನು ತನ್ನೊಂದಿಗೆ ಊಟ ಮಾಡ ಬೇಕೆಂದು ಅಪೇಕ್ಷಿಸಿದನು;ಆಗ ಆತನು ಆ ಫರಿಸಾ ಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕೂತು ಕೊಂಡನು.
ಲೂಕ 14:1
ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು.
1 ಕೊರಿಂಥದವರಿಗೆ 9:19
ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.