Home Bibles ಲೂಕ 11:4 · ಕನ್ನಡ ಬೈಬಲ್
ಲೂಕ 11:4 · ಕನ್ನಡ ಬೈಬಲ್

ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು.

Cross references

ಆದಿಕಾಂಡ 48:16

ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್‌ ಇಸಾಕ್‌ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.

1 ಅರಸುಗಳು 8:34

ಈ ಮನೆಯಲ್ಲಿ ನಿನಗೆ ವಿಜ್ಞಾಪನೆ ಮಾಡಿದರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಮನ್ನಿಸಿ ನೀನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡು.

1 ಅರಸುಗಳು 8:36

ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್‌ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.

ಕೀರ್ತನೆಗಳು 25:11

ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;

ಕೀರ್ತನೆಗಳು 25:18

ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು.

ಕೀರ್ತನೆಗಳು 32:1

ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.

ಕೀರ್ತನೆಗಳು 51:1

ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.

ಕೀರ್ತನೆಗಳು 121:7

ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.

ಕೀರ್ತನೆಗಳು 130:3

ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?

ಯೆಶಾಯ 43:25

ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.

ದಾನಿಯೇಲ 9:19

ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.

ಹೊಶೇಯ 14:2

ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.

ಮತ್ತಾಯ 6:12

ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.

ಮತ್ತಾಯ 11:25

ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.

ಮತ್ತಾಯ 18:35

ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.

ಮತ್ತಾಯ 26:41

ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.

ಲೂಕ 8:13

ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.

ಲೂಕ 22:46

ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.

ಯೋಹಾನ 17:15

ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ.

1 ಕೊರಿಂಥದವರಿಗೆ 10:13

ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ

2 ಕೊರಿಂಥದವರಿಗೆ 12:7

ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.

ಎಫೆಸದವರಿಗೆ 4:31

ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.

ಕೊಲೊಸ್ಸೆಯವರಿಗೆ 3:13

ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.

2 ತೆಸಲೋನಿಕದವರಿಗೆ 3:3

ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.

2 ತಿಮೋಥೆಯ 4:18

ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್‌.

ಯಾಕೋಬ 2:13

ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.

1 ಯೋಹಾನ 1:8

ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.

ಪ್ರಕಟನೆ 2:10

ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ

ಪ್ರಕಟನೆ 3:10

ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.

Interlinear

Choose Theme