ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು.
Cross references
ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ.
ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.
ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು