ತನ್ನ ಒಡೆಯನು ಬಂದಾಗ ಯಾವನು ಹೀಗೆ ಮಾಡುವದನ್ನು ಕಾಣುವನೋ ಆ ಸೇವಕನು ಧನ್ಯನು;
Cross references
ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು.
ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ತನ್ನ ಯಜಮಾನ ನಿಗಾಗಿ ಕಾಯುವವನು ಸನ್ಮಾನ ಹೊಂದುವನು.
ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.
ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು.
ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.