Home Bibles ಲೂಕ 13:14 · ಕನ್ನಡ ಬೈಬಲ್
ಲೂಕ 13:14 · ಕನ್ನಡ ಬೈಬಲ್

ಯೇಸು ಸಬ್ಬತ್‌ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್‌ ದಿನದಲ್ಲಿ ಬೇಡ ಅಂದನು.

Cross references

ನಿರ್ಗಮಕಾಂಡ 20:9

ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ.

ನಿರ್ಗಮಕಾಂಡ 23:12

ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.

ಲೇವ್ಯಕಾಂಡ 23:3

ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್‌ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು.

ಯೆಹೆಜ್ಕೇಲ 20:12

ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್‌ ದಿನಗಳನ್ನು ನಾನು ಅವರಿಗೆ ಕೊಟ್ಟೆನು.

ಮತ್ತಾಯ 12:2

ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್‌ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.

ಮತ್ತಾಯ 12:10

ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್‌ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.

ಮಾರ್ಕ 3:2

ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್‌ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.

ಮಾರ್ಕ 5:22

ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು--

ಲೂಕ 6:7

ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್‌ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.

ಲೂಕ 6:11

ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಲೂಕ 8:41

ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.

ಲೂಕ 14:3

ಆಗ ಯೇಸು ನ್ಯಾಯಶಾಸ್ತ್ರಿಗಳಿಗೂ ಫರಿಸಾಯರಿಗೂ--ಸಬ್ಬತ್‌ ದಿನದಲ್ಲಿ ಸ್ವಸ್ಥಮಾಡುವದು ನ್ಯಾಯವೋ ಎಂದು ಕೇಳಿದನು.

ಯೋಹಾನ 5:15

ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು.

ಯೋಹಾನ 9:14

ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್‌ದಿನವಾಗಿತ್ತು.

ಅಪೋಸ್ತಲರ ಕೃತ್ಯಗಳು 13:15

ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.

ಅಪೋಸ್ತಲರ ಕೃತ್ಯಗಳು 18:8

ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.

ಅಪೋಸ್ತಲರ ಕೃತ್ಯಗಳು 18:17

ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.

ರೋಮಾಪುರದವರಿಗೆ 10:2

ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.

Interlinear

Choose Theme