Home Bibles ಲೂಕ 13:33 · ಕನ್ನಡ ಬೈಬಲ್
ಲೂಕ 13:33 · ಕನ್ನಡ ಬೈಬಲ್

ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.

Cross references

ಮತ್ತಾಯ 20:18

ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.

ಮತ್ತಾಯ 21:11

ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.

ಲೂಕ 9:53

ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು.

ಯೋಹಾನ 4:34

ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.

ಯೋಹಾನ 9:4

ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.

ಯೋಹಾನ 11:9

ಯೇಸು--ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾವ ಮನುಷ್ಯನಾದರೂ ಹಗಲಿ ನಲ್ಲಿ ತಿರುಗಾಡಿದರೆ ಈ ಲೋಕದ ಬೆಳಕನ್ನು ನೋಡು ವದರಿಂದ ಅವನು ಎಡವುವದಿಲ್ಲ.

ಯೋಹಾನ 11:54

ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್‌ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.

ಯೋಹಾನ 12:35

ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.

ಅಪೋಸ್ತಲರ ಕೃತ್ಯಗಳು 10:38

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.

ಅಪೋಸ್ತಲರ ಕೃತ್ಯಗಳು 13:27

ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

Interlinear

Choose Theme