Home Bibles ಲೂಕ 16:13 · ಕನ್ನಡ ಬೈಬಲ್
ಲೂಕ 16:13 · ಕನ್ನಡ ಬೈಬಲ್

ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.

Cross references

ಯೆಹೋಶುವ 24:15

ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.

ಮತ್ತಾಯ 4:10

ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.

ಮತ್ತಾಯ 6:24

ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.

ಲೂಕ 9:50

ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು.

ಲೂಕ 11:23

ನನ್ನ ಜೊತೆಯಲ್ಲಿ ಇಲ್ಲದಿರುವವನು ನನಗೆ ವಿರೋಧವಾಗಿ ದ್ದಾನೆ; ನನ್ನೊಂದಿಗೆ ಕೂಡಿಸದೆ ಇರುವವನು ಚದರಿ ಸುತ್ತಾನೆ.

ಲೂಕ 14:26

ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.

ಲೂಕ 16:9

ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.

ರೋಮಾಪುರದವರಿಗೆ 6:16

ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.

ರೋಮಾಪುರದವರಿಗೆ 8:5

ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.

ಯಾಕೋಬ 4:4

ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.

1 ಯೋಹಾನ 2:15

ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.

Interlinear

Choose Theme