Home Bibles ಲೂಕ 16:20 · ಕನ್ನಡ ಬೈಬಲ್
ಲೂಕ 16:20 · ಕನ್ನಡ ಬೈಬಲ್

ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.

Cross references

1 ಸಮುವೇಲ 2:8

ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.

ಯೋಬ 2:7

ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.

ಕೀರ್ತನೆಗಳು 34:19

ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.

ಕೀರ್ತನೆಗಳು 73:14

ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು.

ಯೆಶಾಯ 1:6

ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.

ಯೆರೆಮಿಯ 8:22

ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.

ಲೂಕ 16:21

ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.

ಲೂಕ 18:35

ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು;

ಯೋಹಾನ 11:1

ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.

ಅಪೋಸ್ತಲರ ಕೃತ್ಯಗಳು 3:2

ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.

ಯಾಕೋಬ 1:9

ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;

ಯಾಕೋಬ 2:5

ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

Interlinear

Choose Theme