ಅದೇ ರೀತಿಯಾಗಿ ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ-- ನಾವು ನಿಷ್ಪ್ರಯೋಜಕರಾದ ಆಳುಗಳು; ಯಾಕಂದರೆ ನಾವು ಮಾಡಬೇಕಾದದ್ದನ್ನೇ ಮಾಡಿದ್ದೇವೆ ಎಂದು ನೀವು ಅನ್ನಿರಿ ಎಂದು ಹೇಳಿದನು.
Cross references
ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ?
ನೀನು ಪಾಪಮಾಡಿದರೆ ಆತನಿಗೆ ವಿರೋಧವಾಗಿ ಏನು ಮಾಡುವಿ? ನಿನ್ನ ದ್ರೋಹಗಳು ಹೆಚ್ಚಿದರೆ ಆತನಿಗೆ ಏನು ಮಾಡುವಿ?
ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ
ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ.
ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ.
ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.
ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ
ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ!
ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
ಅವನು ಕಳೆದುಹೋದ ಸಮಯದಲ್ಲಿ ನಿನಗೆ ಅಪ್ರಯೋಜಕ ನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜನ ವಾಗಿದ್ದಾನೆ.
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.