Home Bibles ಲೂಕ 17:20 · ಕನ್ನಡ ಬೈಬಲ್
ಲೂಕ 17:20 · ಕನ್ನಡ ಬೈಬಲ್

ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.

Cross references

ದಾನಿಯೇಲ 2:44

ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.

ಜೆಕರ್ಯ 4:6

ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಲೂಕ 10:11

ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.

ಲೂಕ 16:16

ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.

ಲೂಕ 17:23

ಅವರು ನಿಮಗೆ--ಇಲ್ಲಿ ನೋಡಿರಿ ಇಲ್ಲವೆ ಅಲ್ಲಿ ನೋಡಿರಿ ಎಂದು ಹೇಳಿದರೆ ಅಲ್ಲಿಗೆ ಹೋಗಬೇಡಿರಿ ಇಲ್ಲವೆ ಅವರನ್ನು ಹಿಂಬಾಲಿಸಬೇಡಿರಿ.

ಲೂಕ 19:11

ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸವಿಾಪವಾಗಿದ್ದದ ರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗು ವದೆಂದು ಅವರು ಭಾವಿಸಿದ್ದದರಿಂದಲೂ ಆತನು ಇನ್ನೂ ಒಂದು ಸಾಮ್ಯವನ್ನು ಹೇಳಿದನು.

ಯೋಹಾನ 18:36

ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.

ಅಪೋಸ್ತಲರ ಕೃತ್ಯಗಳು 1:6

ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು.

Interlinear

Choose Theme