Home Bibles ಲೂಕ 17:26 · ಕನ್ನಡ ಬೈಬಲ್
ಲೂಕ 17:26 · ಕನ್ನಡ ಬೈಬಲ್

ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು.

Cross references

ಆದಿಕಾಂಡ 6:5

ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.

ಆದಿಕಾಂಡ 6:7

ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.

ಆದಿಕಾಂಡ 7:7

ಆಗ ನೋಹನು ಅವನ ಹೆಂಡತಿಯೂ ಕುಮಾರರೂ ಅವರ ಹೆಂಡತಿಯರೂ ಜಲಪ್ರಳಯವನ್ನು ತಪ್ಪಿಸಿ ಕೊಳ್ಳುವದಕ್ಕಾಗಿ ನಾವೆಯೊಳಗೆ ಹೋದರು.

ಯೋಬ 22:15

ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ?

ಮತ್ತಾಯ 24:37

ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.

ಲೂಕ 17:22

ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರನ ದಿವಸಗಳಲ್ಲಿ ಒಂದನ್ನು ನೋಡಬೇಕೆಂದು ನೀವು ಅಪೇಕ್ಷಿಸಿದರೂ ಅದನ್ನು ನೋಡದಂಥ ದಿನಗಳು ಬರುವವು.

ಲೂಕ 17:24

ಯಾಕಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಆಕಾಶದ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿ ಇರುವನು.

ಲೂಕ 18:8

ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.

ಹೆಬ್ರಿಯರಿಗೆ 11:7

ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.

1 ಪೇತ್ರ 3:19

ಆತನು ಆತ್ಮನಿಂದಲೇ ಸೆರೆಯಲ್ಲಿದ್ದ ಆತ್ಮಗಳಿಗೆ ಹೋಗಿ ಸಾರಿದನು;

2 ಪೇತ್ರ 2:5

ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.

2 ಪೇತ್ರ 3:6

ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು.

Interlinear

Choose Theme