Home Bibles ಲೂಕ 17:3 · ಕನ್ನಡ ಬೈಬಲ್
ಲೂಕ 17:3 · ಕನ್ನಡ ಬೈಬಲ್

ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯನ್ನು ತೆಗೆದುಕೊಳ್ಳಿರಿ; ನಿನ ಸಹೋದರನು ನಿನಗೆ ವಿರೋಧವಾಗಿ ತಪ್ಪು ಮಾಡಿದರೆ ಅವನನ್ನು ಗದರಿಸು; ಅವನು ಮಾನಸಾಂತರಪಟ್ಟರೆ ಅವನನ್ನು ಕ್ಷಮಿಸು.

Cross references

ನಿರ್ಗಮಕಾಂಡ 34:12

ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು.

ಲೇವ್ಯಕಾಂಡ 19:17

ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.

ದ್ವಿತೀಯೋಪದೇಶಕಾಂಡ 4:9

ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.

ದ್ವಿತೀಯೋಪದೇಶಕಾಂಡ 4:15

ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ.

ದ್ವಿತೀಯೋಪದೇಶಕಾಂಡ 4:23

ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.

2 ದಿನವೃತ್ತಾಂತ 19:6

ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.

ಕೀರ್ತನೆಗಳು 141:5

ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.

ಸಾಮೇತಿಗಳು 9:8

ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.

ಸಾಮೇತಿಗಳು 17:10

ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ.

ಸಾಮೇತಿಗಳು 27:5

ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.

ಮತ್ತಾಯ 18:15

ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

ಮತ್ತಾಯ 18:21

ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು.

ಲೂಕ 21:34

ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.

ಗಲಾತ್ಯದವರಿಗೆ 2:11

ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.

ಎಫೆಸದವರಿಗೆ 5:15

ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.

ಹೆಬ್ರಿಯರಿಗೆ 12:15

ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ

ಯಾಕೋಬ 5:19

ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.

2 ಯೋಹಾನ 1:8

ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.

Interlinear

Choose Theme