ಯಾವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ಪ್ರಯತ್ನಿಸುವನೋ ಅವನು ಅದನ್ನು ಕಳಕೊಳ್ಳುವನು; ಯಾವನು ತನ್ನ ಪ್ರಾಣವನ್ನು ಕಳಕೊಳ್ಳುವನೋ ಅವನು ಅದನ್ನು ಕಾಪಾಡಿಕೊಳ್ಳು ವನು.
Cross references
ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು.
ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು.
ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ