ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು.
Cross references
ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.
ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.