ಆಗ ಯೇಸು ಅವರಿಗೆ--ಇವುಗಳನ್ನು ನಾನು ಯಾವ ಅಧಿಕಾರದಿಂದ ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಅಂದನು.
Cross references
ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.
ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ.
ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
ನಾನು ಸಹ ನಿಮ್ಮನ್ನು ಕೇಳುವದಾದರೆ ನೀವು ಉತ್ತರ ಕೊಡುವದಿಲ್ಲ; ಇಲ್ಲವೆ ನನ್ನನ್ನು ಹೋಗಗೊಡಿಸುವದಿಲ್ಲ.