ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು.
Cross references
ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.
ಆದರೆ ಪಟ್ಟಣ ವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿ ಬಂಗಾರವನ್ನೂ ಹಿತ್ತಾಳೆ ಕಬ್ಬಿಣದ ಪಾತ್ರೆಗಳನ್ನೂ ಮಾತ್ರ ಕರ್ತನ ಮನೆಯ ಭಂಡಾರದಲ್ಲಿ ಇಟ್ಟರು.
ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು.
ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.
ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.
ಆಗ ನಾನು ಯಾಜಕನಾದ ಶೆಲೆಮ್ಯನನ್ನೂ ಶಾಸ್ತ್ರಿಯಾದ ಚಾದೋಕನನ್ನೂ ಲೇವಿ ಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗನಾದ ಹಾನಾ ನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು; ಅವರು ನಂಬಿಗಸ್ತರೆಂದು ಎಣಿಸಲ್ಪಟ್ಟಿದ್ದರು. ತಮ್ಮ ಸಹೋ ದರರಿಗೆ ವಿಭಾಗಿಸುವದು ಅವರ ಕೆಲಸವಾಗಿತ್ತು.
ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.
ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ;
ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು.
ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.