ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.
Cross references
ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು.
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.