ಆಗ ಆತನು ಅವರಿಗೆ--ಇಗೋ, ನೀವು ಪಟ್ಟಣದೊಳಗೆ ಸೇರಿದಾಗ ಅಲ್ಲಿ ನೀರಿನ ಮಣ್ಣಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ.
Cross references
ನೀನು ಈ ಹೊತ್ತು ನನ್ನನ್ನು ಬಿಟ್ಟು ಹೋದಾಗ ಬೆನ್ಯಾವಿಾನನ ಮೇರೆಯಾದ ಚೆಲ್ಚಹಿ ನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವಿ. ಅವರು ನಿನಗೆ--ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು; ಇದಲ್ಲದೆ ಇಗೋ, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು ನಿನಗೋಸ್ಕರ ಚಿಂತೆಪಟ್ಟು--ನನ್ನ ಮಗನಿಗೋ ಸ್ಕರ ಏನು ಮಾಡಲಿ? ಅನ್ನುತ್ತಾನೆಂದು ಹೇಳುವರು.
ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.
ಇದಾದ ಮೇಲೆ ಆತನು ಎಣ್ಣೇಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸವಿಾಪಿಸಿದಾಗ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ--
ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.