Home Bibles ಲೂಕ 23:51 · ಕನ್ನಡ ಬೈಬಲ್
ಲೂಕ 23:51 · ಕನ್ನಡ ಬೈಬಲ್

ಇವನು ಯೆಹೂದ್ಯರ ಪಟ್ಟಣವಾದ ಅರಿಮ ಥಾಯದವನೂ ದೇವರ ರಾಜ್ಯಕ್ಕಾಗಿ ಎದುರು ನೋಡು ವವನೂ ಆಗಿದ್ದನು. (ಅವನು ಅವರ ಆಲೋಚನೆಗೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ.)

Cross references

ಆದಿಕಾಂಡ 37:21

ಆದರೆ ರೂಬೇನನು ಅದನ್ನು ಕೇಳಿ ಅವನನ್ನು ಅವರ ಕೈಗಳಿಂದ ತಪ್ಪಿಸಿ--ಅವನನ್ನು ಕೊಲ್ಲುವದು ಬೇಡ ಅಂದನು.

ಆದಿಕಾಂಡ 42:21

ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.

ಆದಿಕಾಂಡ 49:18

ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.

ನಿರ್ಗಮಕಾಂಡ 23:2

ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.

1 ಸಮುವೇಲ 1:1

ಎಫ್ರಾಯಾಮ್‌ ಬೆಟ್ಟದಲ್ಲಿರುವ ರಾಮಾತಯಿಮ್‌ ಚೊಫೀಮನಲ್ಲಿ ಎಲ್ಕಾನನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾ ಯಾಮ್ಯನಾದ ಚೂಫನ ಮೊಮ್ಮಗನೂ ತೋಹು ವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು. 3

ಸಾಮೇತಿಗಳು 1:10

ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ.

ಯೆಶಾಯ 8:12

ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.

ಮಾರ್ಕ 15:43

ಆ ಸಮಯದಲ್ಲಿ ಗೌರವವುಳ್ಳವನೂ ಆಲೋಚನಾ ಸಭೆಯವನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿ ಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.

ಲೂಕ 2:25

ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.

ಲೂಕ 2:38

ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.

ಲೂಕ 23:42

ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.

Interlinear

Choose Theme