ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
Cross references
ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ?
ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?
ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ.