Home Bibles ಲೂಕ 24:52 · ಕನ್ನಡ ಬೈಬಲ್
ಲೂಕ 24:52 · ಕನ್ನಡ ಬೈಬಲ್

ಆಗ ಅವರು ಆತನನ್ನು ಆರಾಧಿಸಿ ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿದರು.ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್‌.

Cross references

ಕೀರ್ತನೆಗಳು 30:11

ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.

ಮತ್ತಾಯ 28:9

ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.

ಮತ್ತಾಯ 28:17

ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.

ಯೋಹಾನ 14:28

ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುವದು ಹೇಗೆ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ; ನೀವು ನನ್ನನ್ನು ಪ್ರೀತಿಸಿದ್ದರೆ ನಾನು ನನ್ನ ತಂದೆಯ ಬಳಿಗೆ ಹೊಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದಿರಿ; ನನ್ನ ತಂದೆಯು ನನಗಿಂತಲೂ ದೊಡ್ಡವನಾಗಿದ್ದಾನೆ.

ಯೋಹಾನ 16:7

ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.

ಯೋಹಾನ 16:22

ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.

ಯೋಹಾನ 20:28

ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.

1 ಪೇತ್ರ 1:8

ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

Interlinear

Choose Theme