ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್.
Cross references
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.